Baaluvantha Hoove

ಬಾಳುವಂತ ಹೂವೆ ಬಾಡುವಾಸೆ ಏಕೆ
ಬಾಳುವಂತ ಹೂವೆ ಬಾಡುವಾಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ
ಕವಲು ದಾರಿಯಲ್ಲಿ ಬಾಳು ಸಾಧ್ಯವೆ
ಅವಳಿ ದೊಣಿ ಮೇಲೆ ಯಾನ ಯೋಗ್ಯವೇ
ಬಾಳುವಂತ ಹೂವೆ ಬಾಡುವಾಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ

ಯಾರಿಗಿಲ್ಲ ನೋವು ಯಾರಿಗಿಲ್ಲ ಸಾವು
ವ್ಯರ್ಥ ವ್ಯಸನದಿಂದ ಸಿಹಿಯು ಕೂಡ ಬೇವು
ಬಾಳು ಒಂದು ಸಂತೆ, ಸಂತೆ ತುಂಬ ಚಿಂತೆ
ಮಧ್ಯ ಮನಗಳಿಂದ ಚಿಂತೆ ಬೆಳೆವುದಂತೆ

ಅಂಕೆ ಇರದ ಮನಸನು ಡಂಡಿಸುವುದು ನ್ಯಾಯ
ಮೂಕ ಮುಗ್ದ ದೇಹವ ಹಿಂಸಿಸುವುದು ಹೇಯಾ
ಸಣ್ಣ ಬಿರುಕು ಸಾಲದೆ ತುಂಬು ದೋಣಿ ತಳ ಸೆರಲು
ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಳು

ಬಾಳುವಂತ ಹೂವೆ ಬಾಡುವಾಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ

ಬಾಳ ಕದನದಲ್ಲಿ ಭರವಸೆಗಳು ಬೇಕು
ನಾಳೆ ನನ್ನದೆನ್ನುವ ನಂಬಿಕೆಗಳು ಬೇಕು
ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ
ನಾವೇ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ

ಇಲ್ಲಿ ಈಸಬೇಕು ಇದ್ದು ಜಯಿಸಬೇಕು
ನಾಗರಿಕರಾದಮೇಲೆ ಸುಗುಣರಾಗಬೇಕು
ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ
ಮನದ ಡೊಂಕು ಕಾಣದೆ ಜಗವನೇಕೆ ನೀ ದೂರುವೆ

ಬಾಳುವಂತ ಹೂವೆ ಬಾಡುವಾಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ
ಕವಲು ದಾರಿಯಲ್ಲಿ ಬಾಳು ಸಾಧ್ಯವೆ
ಅವಳಿ ದೊಣಿ ಮೇಲೆ ಯಾನ ಯೋಗ್ಯವೇ
ಬಾಳುವಂತ ಹೂವೆ ಬಾಡುವಾಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ



Credits
Writer(s): Hamsalekha
Lyrics powered by www.musixmatch.com

Link