Bangara Neera Kadalache

(ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ
ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ)

ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ
ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ
ಅದು ನಮ್ಮ ಊರು ಇದು ನಿಮ್ಮ ಊರು ತಮ್ ತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ

ಕರೆ ಬಂದಿತಣ್ಣ ತೆರೆ ಬಂದಿತಣ್ಣ ನೆರೆ ಬಂದಿತಣ್ಣ ಬಳಿಗೇ
ಹರಿತದ ಭಾವ ಬೆರಿತದ ಜೀವ ಅದರೊಳಗೆ ಒಳಗೆ ಒಳಗೆ ಒಳಗೇ

ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್ ನಿಮ್ಮ ಆತ್ಮಗಳಿಗೆ

ಅಂಬಿಗನು ಬಂದ ನಂಬಿಗನು ಬಂದ ಬಂದದ ದಿವ್ಯ ಘಳಿಗೆ
ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ
ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ
ಅದು ನಮ್ಮ ಊರು ಇದು ನಿಮ್ಮ ಊರು ತಮ್ ತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ

(ಹಯ್ಯಾ ಹಯ್ಯಾ ಹಯ್ಯಾ ಹಯ್ಯಾ ಹೊ)
(ಹಯ್ಯಾ ಹಯ್ಯಾ ಹಯ್ಯಾ ಹಯ್ಯಾ ಹೊ)

ಇದು ಉಪ್ಪು ನೀರ ಕಡಲಲ್ಲೋ ನಮ್ಮ ಒಡಲಲ್ಲು ಇದರ ನೆಲೆಯು
ಕಂಡವರಿಗಲ್ಲೊ ಕಂಡವರಿಗಷ್ಟೇ ತಿಳಿದದಾ ಇದರ ಬೆಲೆಯು

ಸಿಕ್ಕಲ್ಲಿ ಅಲ್ಲ ಸಿಕ್ಕಲ್ಲೆ ಮಾತ್ರ ಒಡೆಯುವುದು ಇದರ ಸೆಲೆಯು

ಕಣ್ ಅರಳಿದಾಗ ಕಣ್ ಹೊರಳಿದಾಗ ಹೊಳೆಯುವುದು ಇದರ ಕಳೆಯು
ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ
ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ
ಅದು ನಮ್ಮ ಊರು ಇದು ನಿಮ್ಮ ಊರು ತಮ್ ತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ

ಬಂದವರ ಬಳಿಗೆ ಬಂದದ ಮತ್ತು ನಿಂದವರ ನೆರೆಗೂ ಬಂದದೋ ಬಂದದ
ನವ ಮನು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ

ಅಂದದೋ ಅಂದದ, ಅಂದದೋ ಅಂದದ
(ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ
ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ)
(ಅಂದದೋ ಅಂದದ)

Credits
Writer(s): C Aswath, D.r. Bendre
Lyrics powered by www.musixmatch.com

Link