Kurudu Kanchana

ಕುರುಡು ಕಾಂಚಾಣ ಕುಣಿಯುತಲಿತ್ತು ಕಾಲಿಗೆ ಬಿದ್ದವರ ತುಳಿಯುತಲಿತ್ತು

ಕುರುಡು ಕಾಂಚಾಣ... ಕುರುಡು ಕಾಂಚಾಣ

ಬಾಣಂತಿಯೆಲುಬ ಸಾ ಬಾಣದ ಬಿಳುಪಿನ
ಕಾಣದ ಕಿರುಗೆಜ್ಜೆ ಕಾಲಾಗ ಇತ್ತೋ
ಬಾಣಂತಿಯೆಲುಬ ಸಾ ಬಾಣದ ಬಿಳುಪಿನ
ಕಾಣದ ಕಿರುಗೆಜ್ಜೆ ಕಾಲಾಗ ಇತ್ತೋ
ಸಣ್ಣ ಕಂದಮ್ಮಗಳ ಕಣ್ಣೀನ ಕವಡೀಯ
ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ
ಸಣ್ಣ ಕಂದಮ್ಮಗಳ ಕಣ್ಣೀನ ಕವಡೀಯ
ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ
(ಕುರುಡು ಕಾಂಚಾಣ
ಕುರುಡು ಕಾಂಚಾಣ
ಕುರುಡು ಕಾಂಚಾಣ ಕುಣಿಯುತಲಿತ್ತು ಕಾಲಿಗೆ ಬಿದ್ದವರ ತುಳಿಯುತಲಿತ್ತು
ಕುರುಡು ಕಾಂಚಾಣ ಕುಣಿಯುತಲಿತ್ತು ಕಾಲಿಗೆ ಬಿದ್ದವರ ತುಳಿಯುತಲಿತ್ತು)

ಬಡವರ ಒಡಲಿನ ಬಡಬಾನೆಲದಲ್ಲಿ
ಸುಡು ಸುಡು ಪಂಜು ಕೈಯೊಳಗಿತ್ತೋ
ಬಡವರ ಒಡಲಿನ ಬಡಬಾನೆಲದಲ್ಲಿ
ಸುಡು ಸುಡು ಪಂಜು ಕೈಯೊಳಗಿತ್ತೊ
ಕಂಬನಿ ಕುಡಿಯುವ ಹುಂಬ ಬಾಯಿಲೆ
ಮೈದುಂಬಿದಂತಧೊ ಉಧೊ ಎನ್ನುತ್ತಲಿತ್ತೋ
ಕಂಬನಿ ಕುಡಿಯುವ ಹುಂಬ ಬಾಯಿಲೆ
ಮೈದುಂಬಿದಂತಧೊ ಉಧೊ ಎನ್ನುತ್ತಲಿತ್ತೋ
(ಕುರುಡು ಕಾಂಚಾಣ
ಕುರುಡು ಕಾಂಚಾಣ
ಕುರುಡು ಕಾಂಚಾಣ ಕುಣಿಯುತಲಿತ್ತು ಕಾಲಿಗೆ ಬಿದ್ದವರ ತುಳಿಯುತಲಿತ್ತು
ಕುರುಡು ಕಾಂಚಾಣ ಕುಣಿಯುತಲಿತ್ತು ಕಾಲಿಗೆ ಬಿದ್ದವರ ತುಳಿಯುತಲಿತ್ತು)

ಕೂಲಿ ಕುಂಬಳಿಯವರ ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯೊಳಗಿತ್ತೋ
ಕೂಲಿ ಕುಂಬಳಿಯವರ ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯೊಳಗಿತ್ತೋ
ಗುಡಿಯೊಳಗೆ ಗಣಣ ಮಹಡಿಯೊಳಗೆ ತನನ ಅಂಗಡಿಯೊಳಗ ಝಣಣಣ ನುಡಿಗೊಡುತ್ತಿತ್ತೋ
ಗುಡಿಯೊಳಗೆ ಗಣಣ ಮಹಡಿಯೊಳಗೆ ತನನ ಅಂಗಡಿಯೊಳಗ ಝಣಣಣ ನುಡಿಗೊಡುತ್ತಿತ್ತೋ
(ಕುರುಡು ಕಾಂಚಾಣ
ಕುರುಡು ಕಾಂಚಾಣ
ಕುರುಡು ಕಾಂಚಾಣ ಕುಣಿಯುತಲಿತ್ತು ಕಾಲಿಗೆ ಬಿದ್ದವರ ತುಳಿಯುತಲಿತ್ತು
ಕುರುಡು ಕಾಂಚಾಣ ಕುಣಿಯುತಲಿತ್ತು ಕಾಲಿಗೆ ಬಿದ್ದವರ ತುಳಿಯುತಲಿತ್ತು)

ಹ್ಯಾಂಗಾರ ಕುಣಿಕುಣಿದು ಮಂಗಾಟ ನಡೆದಾಗ
ಅಂಗಾತ ಬಿತ್ತೋ, ಹೆಗಲಲ್ಲಿ ಎತ್ತೋ

Credits
Writer(s): C Aswath, D.r. Bendre
Lyrics powered by www.musixmatch.com

Link