Hendathiyobbalu

ಹೆಂಡತಿಯೊಬ್ಬಳು
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ
ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ
ಹೆಂಡತಿಯೊಬ್ಬಳು

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ಹುಣ್ಣಿಮೆ, ಹೋಳಿಗೆ ದೀಪ
ಹೆಂಡತಿ ತವರಿಗೆ ಹೊರಡುವೆನೆಂದರೆ
ನನಗಿಲ್ಲದ ಕೋಪ
ಕೈ ಹಿಡಿದವಳು, ಕೈ ಬಿಡದವಳು
ಮಾಡಿದ ಅಡಿಗೆಯೇ ಚಂದ
ನಾಗರ ಕುಚ್ಚಿನ ನಿಡುಜಡೆಯವಳು
ಈಕೆ ಬಂದುದೆಲ್ಲಿಂದ?
ಹೆಂಡತಿಯೊಬ್ಬಳು

ಕಬ್ಬಿಗನೂರಿಗೆ ದಾರಿಯಿದ್ದರೆ ಕನಸೇ ಇರಬೇಕು
ಅಲ್ಲಿಯ ದೊರೆತನ ಸಿಗುವಂತಿದ್ದರೆ ನನಗೆ ಸಿಗಬೇಕು
ತಾರೆಯ ಬೆಳಕಿನ ತುಂಬಿದ ಸಭೆಯಲಿ ಸುಂದರಿ ಮೆರೆದಾಳು
ನನ್ನೊಡನವಳು ಸಿಂಹಾಸನದಲಿ ಮೆಲ್ಲನೆ ನಕ್ಕಳು
ಹೆಂಡತಿಯೊಬ್ಬಳು

ಚಂದಿರನೂರಿನ ಅರಮನೆಯಿಂದ ಬಂದವರೀಗೆಲ್ಲಿ?
ಬೆಳ್ಳಿಯ ಕೋಟೆಯ ಬಾಗಿಲಿನಿಂದ ಬಂದವರೀಗೆಲ್ಲಿ?
ಹೆಂಡತಿಯೊಂದಿಗೆ ಬಡತನ ದೊರೆತನ ಏನೂ ಭಯವಿಲ್ಲ
ಹೆಂಡತಿಯೊಂದಿಗೆ ಬಡತನ ದೊರೆತನ ಏನೂ ಭಯವಿಲ್ಲ
ಹೆಂಡತಿಯೊಲುಮೆಯ ಭಾಗ್ಯವನರಿಯದ
ಹೆಂಡತಿಯೊಲುಮೆಯ ಭಾಗ್ಯವನರಿಯದ ಗಂಡಿಗೆ ಜಯವಿಲ್ಲ

ಹೆಂಡತಿಯೊಬ್ಬಳು
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ
ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ
ಹೆಂಡತಿಯೊಬ್ಬಳು



Credits
Writer(s): Mysore Ananthaswamy, K.s. Narasimha Swamy
Lyrics powered by www.musixmatch.com

Link