Yaava Mohana Murali

ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು

ಹೂವು ಹಾಸಿಗೆ ಚಂದ್ರ ಚಂದನ, ಬಾಹು ಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣಗಳದೀ ರಿಂಗಣ
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು

ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ?
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು

ವಿವಶವಾಯಿತು ಪ್ರಾಣ ಹಾ ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ
ಯಾವ ಮೋಹನ ಮುರಳಿ ಕರೆಯಿತು ಇದ್ದಕಿದ್ದಲೇ ನಿನ್ನನು
ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯ್ಯನು
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು

Credits
Writer(s): Mysore Ananthaswamy, M. M. Gopalakrishna Adiga
Lyrics powered by www.musixmatch.com

Link