Nee Nenedare - From "Junglee"

ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ
ನಾ ಬರೆಯದ ಕವಿತೆಗಳ ನೀನೇ ಒಂದು ಸಂಕಲನ
ಓ ಜೀವವೇ ಹೇಳಿಬಿಡು ನಿನಗೂ ಕೂಡ ಹೀಗೇನಾ?
ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ
ಏನೋ ಒಂದು ಸಂಚಲನ

ತಂದೆನು ಪಿಸುಮಾತು ಜೇಬಲ್ಲಿ
ಕಂಡೆನು ಹಸಿ ಮಿಂಚು ಕಣ್ಣಲ್ಲಿ
ಬಂದೆನು ತುಸು ದೂರ ಜೊತೆಯಲ್ಲಿ ಮರೆತು ಮೈಮನ
ನಿನ್ನ ಬೆರಳು ಹಿಡಿದು ನಾನು ನೀರ ಮೇಲೆ ಬರೆಯಲೇನು
ನಿನ್ನ ನೆರಳು ಸುಳಿಯುವಲ್ಲೂ ಹೂವ ತಂದು ಸುರಿಯಲೇನು
ನಂಬಿ ಕೂತ ಹುಂಬ ನಾನು ನೀನು ಹೀಗೇನಾ?

ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ
ನಾ ಬರೆಯದ ಕವಿತೆಗಳ ನೀನೇ ಒಂದು ಸಂಕಲನ

ಹೂವಿನ ಮಳೆ ನೀನು ಕನಸಲ್ಲಿ
ಮೋಹದ ಸೆಲೆ ನೀನು ಮನಸಲ್ಲಿ
ಮಾಯದ ಕಲೆ ನೀನು ಎದೆಯಲ್ಲಿ ಒಲಿದ ಈ ಕ್ಷಣ
ನಿನ್ನ ಗುಂಗಿನಿಂದ ನನ್ನ ಬಂದು ಪಾರು ಮಾಡು ನೀನು
ಒಂದೆ ಕನಸು ಕಾಣುವಾಗ ನಾನು ನೀನು ಬೇರೆಯೇನು
ಶರಣು ಬಂದ ಚೋರ ನಾನು ನೀನು ಹೀಗೆನಾ?

ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ
ನಾ ಬರೆಯದ ಕವಿತೆಗಳ ನೀನೇ ಒಂದು ಸಂಕಲನ
ಓ ಜೀವವೇ ಹೇಳಿಬಿಡು ನಿನಗೂ ಕೂಡ ಹೀಗೇನಾ?
ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ
ಆಹಾ, ಏನೋ ಒಂದು ಸಂಚಲನ



Credits
Writer(s): Jayanth Kaikini, Mani Kanth Kadri
Lyrics powered by www.musixmatch.com

Link