Kelisade Kallukallinali

ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ
ಕೇಳು ನೀನು

ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ
ಕೇಳು ನೀನು

ಭೂರಮೆಯೇ ಆಧಾರ ಈ ಕಲೆಯ ಸಿಂಗಾರ
ಬಂಗಾರ ತೇರೇರಿ ಮೂಡಣವೇ ಸಿಂಧೂರ
ದಿನ ದಿನ ದಿನ ಹೊಸದಾಗಿದೆ
ಇಂದಿಗೂ ಜೀವಂತ ಶಿಲೆಯೊಳಗೆ ಸಂಗೀತ
ಸ್ವರ ಸ್ವರದ ಏರಿಳಿತ ತುಂಗೆಯಲಿ ಶ್ರೀಮಂತ
ಕಣ ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು

ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ
ಕೇಳು ನೀನು

ಗಾಳಿಯೇ ಆದೇಶ ಮೇಘವೇ ಸಂದೇಶ
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತು ಋತುಗಳು ನಿನ್ನ ಕಾದಿವೆ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವು ಮೈತಾಳಿ ಜೀವನದ ಜೋಕಾಲಿ
ಯುಗಯುಗದಲು ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು

ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ
ಕೇಳು ನೀನು
ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಕನ್ನಡ ನುಡಿ

Credits
Writer(s): Hamsalekha
Lyrics powered by www.musixmatch.com

Link