Amma Ninna Edeyaaladalli (From "Sampada")

ಅಮ್ಮಾ, ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು
ಅಮ್ಮಾ, ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು
ಕಡಿಯಾಲೊಲ್ಲೆ ನೀ ಕರುಳ ಬಳ್ಳಿ ಒಲವೂಡುತಿರುವ ತಾಯೆ
ಬಿಡದ ಭುವಿಯಾ ಮಾಯೆ
ಅಮ್ಮಾ, ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು

ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ ಅಡಗಲಿ ಎಷ್ಟು ದಿನ?
ದೂಡು ಹೊರಗೆ ನನ್ನ
ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ ಅಡಗಲಿ ಎಷ್ಟು ದಿನ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳ ನೋಟ ಕಲಿವೆ
ಓಟ ಕಲಿವೆ, ಒಳ ನೋಟ ಕಲಿವೆ
ನಾ ಕಲಿವೆ ಊರ್ಧ್ವ ಗಮನ
ಓ! ಅಗಾಧ ಗಗನ
ಓ! ಅಗಾಧ ಗಗನ

ಅಮ್ಮಾ, ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು

ಮೇಲೆ ಹಾರಿ ನಿನ್ನ ಸೆಳೆತ ಮೀರಿ ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಮೇಲೆ ಹಾರಿ ನಿನ್ನ ಸೆಳೆತ ಮೀರಿ ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು ಬಂದೇ ಬರುವೆನು
ಇಂಧನ ತೀರಲು ಬಂದೇ ಬರುವೆನು
ಮತ್ತೇ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ
ಮೂರ್ತ ಪ್ರೇಮದೆಡೆಗೆ

ಅಮ್ಮಾ, ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು
ಮಿಡುಕಾಡುತಿರುವೆ ನಾನು

Credits
Writer(s): C. Ashwath, B.r. Lakshman Rao
Lyrics powered by www.musixmatch.com

Link