Ninna Premada Pariya

ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು
ನಿನ್ನೊಳಿದೆ ನನ್ನ ಮನಸು

ಸಾಗರನ ಹೃದಯದಲಿ ರತ್ನ ಪರ್ವತ ಮಾಲೆ ಮಿಂಚಿನಲಿ ನೇವುದಂತೆ
ತೀರದಲಿ ಬಳಕುವಲೆ ಕಣ್ಣ ಚುಂಬಿಸಿ ಮತ್ತೆ
ತೀರದಲಿ ಬಳಕುವಲೆ ಕಣ್ಣ ಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ
ನಿನ್ನೊಳಿದೆ ನನ್ನ ಮನಸು

ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ

ಅಲೆ ಬಂದು ಕರೆಯುವುದು ನಿನ್ನೊಲುಮೆ ಅರಮನೆಗೆ ಒಳಗಡಲ ರತ್ನಪುರಿಗೆ
ಅಲೆ ಇಡುವ ಮುತ್ತಿನಲೇ ಕಾಣುವುದು ನಿನ್ನೊಲುಮೆ
ಅಲೆ ಇಡುವ ಮುತ್ತಿನಲೇ ಕಾಣುವುದು ನಿನ್ನೊಲುಮೆ
ಒಳಗುಡಿಯ ಮೂರ್ತಿಮಹಿಮೆ
ನಿನ್ನೊಳಿದೆ ನನ್ನ ಮನಸು

ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ತಾರೆಯಾಗದೆ ಕಾಣುವೀ ಮಿಂಚು
ನಾಳೆ ಅರ್ಧಾಂಗಿ
ತಾರೆಯಾಗದೆ ಕಾಣುವೀ ಮಿಂಚು
ನಾಳೆ ಅರ್ಧಾಂಗಿ



Credits
Writer(s): Veer Samarth, K.s.narasimha Swami
Lyrics powered by www.musixmatch.com

Link