Pavamana Jagadaprana

ಪವಮಾನ ಪವಮಾನ ಜಗದಾ ಪ್ರಾಣಾ
ಪವಮಾನ ಪವಮಾನ ಜಗದಾ ಪ್ರಾಣಾ
ಸಂಕರುಷಣ ಭವಭಯಾರಣ್ಯ ದಹನ
ಪವನ
ಶ್ರವಣವೇ ಮೊದಲಾದ ನವವಿಧ ಭಕುತಿಯ
ತವಕದಿಂದಲಿ ಕೊಡು ಕವಿಗಳ ಪ್ರಿಯಯಾ
ಪವಮಾನ ಪವಮಾನ ಜಗದಾ ಪ್ರಾಣಾ
ಪವಮಾನ ಪವಮಾನ ಜಗದಾ ಪ್ರಾಣಾ

ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮದಿ ವರ್ಗ ರಹಿತ
ಕಾಮದಿ ವರ್ಗ ರಹಿತ
ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ ರಾಮಚಂದ್ರನ ನಿಜದೂತ
ರಾಮಚಂದ್ರನ ನಿಜದೂತ
ಯಾಮ ಯಾಮಕೆ ನಿನ್ನಾರಾಧಿಪುದಕೆ
ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ

ಈ ಮನಸಿಗೆ ಸುಖಸ್ತೋಮವ ತೋರುತ
ಪಾಮರ ಮತಿಯನು ನೀ ಮಾಣಿಪುದು

ಪವಮಾನ ಪವಮಾನ ಜಗದಾ ಪ್ರಾಣಾ
ಪವಮಾನ ಪವಮಾನ ಜಗದಾ ಪ್ರಾಣಾ

ವಜ್ರ ಶರೀರ ಗಂಭೀರ ಮುಕುಟಧರ ದುರ್ಜನವನ ಕುಠಾರ
ಕುಠಾರ
ದುರ್ಜನವನ ಕುಠಾರ
ನಿರ್ಜರ ಮಣಿದಯಾ ಪಾರ ವಾರ ಉದಾರ ಸಜ್ಜನರಘ ಪರಿಹಾರ
ಸಜ್ಜನರಘ ಪರಿಹಾರ
ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು
ಮೂರ್ಜಗವರಿವಂತೆ ಗರ್ಜನೆ ಮಾಡಿದಿ

ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜ ಪಾದದ ಧೂಳಿ
ಮೂರ್ಜಗದಲಿ ಭವ ವರ್ಜಿತನೆನಿಸೋ

ಪವಮಾನ ಪವಮಾನ ಜಗದಾ ಪ್ರಾಣಾ

ಪ್ರಾಣ ಅಪಾನ ವ್ಯಾನ ಉದಾನ ಸಮಾನ ಆನಂದ ಭಾರತಿ ರಮಣ
ಆನಂದ ಭಾರತಿ ರಮಣ
ನೀನೆ ಶರ್ವಾದಿ ಗೀರ್ವಾಣ ಆದ್ಯರಿಗೆ ಜ್ಞಾನಧನ ಪಾಲಿಪ ವರೇಣ್ಯ
ಧನ ಪಾಲಿಪ ವರೇಣ್ಯ
ನಾನು ನಿರುತದಲಿ ಏನೇನೆಸಗಿದೆ
ಮಾನಸಾದಿ ಕರ್ಮ ನಿನಗೊಪ್ಪಿಸಿದೆನೋ

ಪ್ರಾಣನಾಥ ಸಿರಿವಿಜಯವಿಠಲನ
ಕಾಣಿಸಿ ಕೊಡುವದು ಭಾನು ಪ್ರಕಾಶ

ಪವಮಾನ ಪವಮಾನ ಜಗದಾ ಪ್ರಾಣಾ
ಸಂಕರುಷಣ ಭವಭಯಾರಣ್ಯ ದಹನ



Credits
Writer(s): Upendra Kumar, Vijaya Dasa
Lyrics powered by www.musixmatch.com

Link