Nee Heenga Nodabeda

ನೀ ಹಿಂಗ ನೋಡಬ್ಯಾಡ ನನ್ನ
ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ನೀ ಹಿಂಗ ನೋಡಬ್ಯಾಡ ನನ್ನ,
ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ದಾರೀಲೆ ನೆನೆದ ಕೈಹಿಡಿದೆ ನೀನು ತಣ್ಣಾಗ ಅಂತ ನಾ ತಿಳಿದು
ಬಿಡವೊಲ್ಲಿ ಇನ್ನೂನೂ ಬೂದಿ ಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲನ್ನ
ಆ ಗಾದಿಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ

ನೀ ಹಿಂಗ ನೋಡಬ್ಯಾಡ ನನ್ನ,
ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ಇಬ್ಬನಿ ತೊಳೆದರೂ ಹಾಲು ಮೆತ್ತಿದಾ ಕವಳಕಾಂಟೆಯ ಹಣ್ಣು
ಹೊಳೆ ಹೊಳೆವ ಹಾಂಗ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನ ತನ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣಿಮಿ ಚಂದಿರನ ಹೆಣಾ ಬಂತೋ ಮುಗಿಲಾಗ ತೇಲತಾ ಹಗಲ

ನೀ ಹಿಂಗ ನೋಡಬ್ಯಾಡ ನನ್ನ
ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ನಿನ್ನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡನಡಕ ಹುಚ್ಚು ನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರೆ ಅತ್ತು ಬಿಡು, ಹೊನಲು ಬರಲಿ, ನಕ್ಕ್ಯಾಕ ಮರಸತಿ ದುಕ್ಕ
ಎದೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿ ಕಚ್ಚಿ ಹಿಡಿಯದಿರು ಬಿಕ್ಕ

ನೀ ಹಿಂಗ ನೋಡಬ್ಯಾಡ ನನ್ನ
ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹಿಂಗ ನೋಡಬ್ಯಾಡ ನನ್ನ
ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ



Credits
Writer(s): M Ranga Rao, Bendre
Lyrics powered by www.musixmatch.com

Link