Nadaviradha Baduku

ನಾದವಿರದ ಬದುಕೇ, ಉನ್ಮಾದ ಕೋರಬೇಡ
ಈ ನೆಲದ ಜಲವ ಸವಿದು, ರವಿ ಕರುಣೆ ಮರೆಯಬೇಡ

(ನಾದವಿರದ ಬದುಕೇ, ಉನ್ಮಾದ ಕೋರಬೇಡ
ಈ ನೆಲದ ಜಲವ ಸವಿದು, ರವಿ ಕರುಣೆ ಮರೆಯಬೇಡ)

ಬಿಡುವಿರದ ದುಡಿತದಲ್ಲಿ ಬಲಿಯಾಗದಿರಲಿ ಬೆರಗು
ಸುಡುಬಾಳಿನಂಚಿನಲ್ಲಿ ಮೆರೆದಿರಲಿ ಕಲೆಯ ಸೆರಗು

(ಕಳೆ ಎಷ್ಟೇ ಇದ್ದರೇನು, ಕನಸಿರದ ಬಾಳು ಬಾಳೆ)
ಮಳೆಬಿಲ್ಲು ಸಿಂಗರಿಸದ ಕರಿಮುಗಿಲಿನೊಂದು ಮಾಲೆ
ಕರಿಮುಗಿಲಿನೊಂದು ಮಾಲೆ

ನಾದವಿರದ ಬದುಕೇ, ಉನ್ಮಾದ ಕೋರಬೇಡ
ಈ ನೆಲದ ಜಲವ ಸವಿದು, ರವಿ ಕರುಣೆ ಮರೆಯಬೇಡ
ನಾದವಿರದ ಬದುಕೇ, ಉನ್ಮಾದ ಕೋರಬೇಡ
ಈ ನೆಲದ ಜಲವ ಸವಿದು, ರವಿ ಕರುಣೆ ಮರೆಯಬೇಡ

ಉದಯಾಸ್ತಗಳಲಿ ಲೋಕ ತಾನಲ್ಲ ಬರಿಯ ಮಣ್ಣು
ಚೆಲುವೆದುರಿನಲ್ಲಿ ಸತತ ಹೊಸತಾಗಬೇಕು ಕಣ್ಣು

(ಚಣಚಣವು ಜೀವ ಮಾಗಿ, ಮರುಹುಟ್ಟು ಪಡೆಯುತಿರಲಿ)
ಹೊಸ ನಲವ ನೆಲೆಗೆ ತಾನು ನಿಲದಂತೆ ನಡೆಯುತಿರಲಿ
ನಿಲದಂತೆ ನಡೆಯುತಿರಲಿ

ನಾದವಿರದ ಬದುಕೇ, ಉನ್ಮಾದ ಕೋರಬೇಡ
ಈ ನೆಲದ ಜಲವ ಸವಿದು, ರವಿ ಕರುಣೆ ಮರೆಯಬೇಡ
ನಾದವಿರದ ಬದುಕೇ, ಉನ್ಮಾದ ಕೋರಬೇಡ
ಈ ನೆಲದ ಜಲವ ಸವಿದು, ರವಿ ಕರುಣೆ ಮರೆಯಬೇಡ
ರವಿ ಕರುಣೆ ಮರೆಯಬೇಡ
ರವಿ ಕರುಣೆ ಮರೆಯಬೇಡ



Credits
Writer(s): Praveen B.v., Pradeep B.v., K.s. Nisar Ahamed
Lyrics powered by www.musixmatch.com

Link